ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು.
ಪೊಲೀಸ್ ಆರೋಗ್ಯ ಕೇಂದ್ರ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿವೆ. ಆರೋಗ್ಯ ಕೇಂದ್ರವು ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಕೇಂದ್ರದಲ್ಲಿ ಇಬ್ಬರು ಮೆಡಿಕಲ್ ಆಫೀಸರ್, ಫಾರ್ಮಾಸಿಸ್ಟ್, ಮೈನರ್ ಆಪರೇಷನ್ ಥಿಯೇಟರ್, ಕಿರಿಯ ಆರೋಗ್ಯ ಸಹಾಯಕರು ಕೆಲಸ ನಿರ್ವಹಿಸಲಿದ್ದಾರೆ. ಲ್ಯಾಬೊರೇಟರಿ, ಫಿಸಿಯೋಥೆರಪಿ ಸೇವೆ ದೊರೆಯಲಿದೆ.
ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ತಪಾಸಣೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗುತಿತ್ತು. ಇನ್ನು ಮುಂದೆ ಪೊಲೀಸ್ ಆರೋಗ್ಯ ಕೇಂದ್ರದಲ್ಲಿ ವಾರ್ಷಿಕ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಕೇಂದ್ರದ ಮುಖ್ಯಸ್ಥ ಡಾ.ವೆಂಕಟೇಶ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಎಂಎಲ್‌ಸಿ ಮಂಜೇಗೌಡ, ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇದ್ದರು.