ಜಿಲ್ಲೆ

ಸಿದ್ದರಾಮಯ್ಯ ಹಿಂದುಳಿದ ವರ್ಗದವರ ಕೈ ಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ ಹಿಡಿದುಕೊಂಡು ಓಲೈಸುತ್ತಿದ್ದಾರೆ

ಮೈಸೂರು: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದವರು ನೀಡುತ್ತಿರುವ ದುರಹಂಕಾರದ ಹೇಳಿಕೆಗಳನ್ನು ಯಾರೂ ಸಹಿಸುವುದಿಲ್ಲ. ಇದಕ್ಕೆ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಹತ್ಯೆ ಗಂಭೀರವಾದ ಪ್ರಕರಣವಾಗಿದೆ. ಆದರೆ, ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರೇ ಹೇಳಿದ್ದಾರೆ. ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರ ಎಂದು ಜನರೇ ಮಾತನಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸಚಿವರು ಒಂದು ಧರ್ಮ ಜನರನ್ನು ಓಲೈಸಲು ಮುಂದಾಗಿದ್ದಾರೆ. ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಪೋಷಕರಿಗೆ ಸಾಂತ್ವನ ಹೇಳದೇ ನೋಯಿಸುವಮಾತುಗಳನ್ನು ಆಡುತ್ತಿದ್ದಾರೆ. ಇದರ ವಿರುದ್ಧ ನಾವು ಚುನಾವಣೆಯನ್ನು ಬದಿಗಿಟ್ಟು ಹೋ ರಾಡುತ್ತಿದ್ದೇವೆ ಎಂದರು.

ನೇಹಾ ಆರೋಪಿ ಜತೆಗಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇಂತಹ ನೀಚ ಕೆಲಸ ಮಾಡುವುದರಲ್ಲಿ ಕಾಂಗ್ರೆಸ್ನವರು ನಿಸ್ಸೀಮರು ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದವರ ಕೈ ಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ ಹಿಡಿದುಕೊಂಡು ಓಲೈಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪರಿಣಾಮವನ್ನೂ ಎದುರಿಸಬೇ ಕಾಗುತ್ತದೆ.