ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎ್ಐಆರ್ ದಾಖಲಿಸಲು ನ್ಯಾಯಾಲಯ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಜೆಡಿಎಸ್ ಜಿಲ್ಲಾದ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಆರೋಪ ಬಂದ ಕೂಡಲೇ ಸಂವಿಧಾನಕ್ಕೆ ಗೌರವ ನೀಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ಬಿಟ್ಟು ಸಿದ್ದರಾಮಯ್ಯ ಮೊಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು. ಮುಖಂಡರಾದ ಮಾರುತಿ ಅಷ್ಟಗಿ, ನಾಸೀರ ಬಾಗವಾನ್, ಈರಣ್ಣ ರೇವಡಿ, ಬಿ.ಎಸ್.ರುದ್ರಗೌಡರ, ಸುಭಾಷ ಬಾಗೇವಾಡಿ, ಸುನೀಲ ವೆರಣೇಕರ್, ರಾಮು ರಜಪೂತ ಇತರರಿದ್ದರು.