ಜಿಲ್ಲೆ

ಸಿದ್ದರಾಮಯ್ಯ ಮುಸ್ಲಿಂ ಓಲೈಕೆ ಬಿಡಲಿ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ದೇಶದ ಭದ್ರತೆ ವಿಷಯದಲ್ಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆ ರಾಜಕಾರಣದಿಂದ ಹೊರಗೆ ಬರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಮುಸ್ಲಿಂರಲ್ಲಿಯು ಸಹ ದೇಶಭಕ್ತರಾಗಿದ್ದಾರೆ. ಆದರೆ, ಕೆಲವರು ಮಾತ್ರ ಪಾಕಿಸ್ತಾನಿ ಪ್ರಿಯರಾಗಿದ್ದಾರೆ ಎಂದರು.

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನೆ ದಾಳಿ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಬೆನ್ನುಲುಬಾಗಿ ನಿಂತಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಸಚಿವ ಸಂತೋಷ ಲಾಡ್ ಅವರು ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. ಅವರು ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ನೋಡಿ ಕಲಿಯಬೇಕು ಎಂದು ಟೀಕಿಸಿದರು.

ಕಾಂಗ್ರೆಸ್ ಮುಖಂಡರು ಮುಸ್ಲಿಂ ಓಲೈಕೆ ರಾಜಕಾರಣವನ್ನೇ ಗುರಿಯಾಗಿಸಿಕೊಂಡಿದ್ದಾರೆ. ಉಗ್ರಗಾಮಿಗಳು ಸಹ ಮುಸ್ಲಿಂಯೇತರ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದರು.