ಜಿಲ್ಲೆ

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆ

Mandya

ಮದ್ದೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರು ಗೂಂಡಾಗಳಂತೆ ವರ್ತಿಸುತ್ತಾರೆಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಕೀಲರು ಮಂಗಳವಾರ ನ್ಯಾಯಾಲಯದ ಕಾರ್ಯ ಕಲಾಪದಿಂದ ಹೊರಗುಳಿದು ಪ್ರತಿಭಟನೆ ಮಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ ವಕೀಲರ ವಿರುದ್ಧ ಮಾಧ್ಯಮದ ಎದುರು ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ವಕೀಲರ ಸಂಘದ ಅಧ್ಯಕ್ಷ ಜಿ.ಎನ್.ಸತ್ಯ, ಉಪಾಧ್ಯಕ್ಷ ಕೃಷ್ಣೇಗೌಡ, ಕಾರ್ಯದರ್ಶಿ ಎ.ಶಿವಣ್ಣ, ವಕೀಲರಾದ ಸಂತೋಷ್‌ಕುಮಾರ್, ಶಿವಣ್ಣ, ಲೋಕೇಶ್, ಪ್ರಶಾಂತ್, ಕೆ.ಎಂ.ರಮೇಶ್, ಸಿದ್ದರಾಜು, ವೆಂಕಟೇಶ್ ಇದ್ದರು.