ಜಿಲ್ಲೆ

ಸ್ವೀಪ್ ಸಮಿತಿಯಿಂದ ಸಹಿ ಸಂಗ್ರಹ ಅಭಿಯಾನ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವಿಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಸಹಿ ಸಂಗ್ರಹ ಅಭಿಯಾನವನ್ನು ಇಲ್ಲಿನ ತಾಲೂಕು ಆಡಳಿತಸೌಧದ ಮುಂಭಾಗದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಹಾಗೂ ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ಅವರು ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಡಾ.ಸಂಗಮೇಶ ಬಂಗಾರಿಮಠ, ಚಂದ್ರಶೇಖರ ಕುರ್ತಕೋಟಿ, ಶಿವಾನಂದ ನಸಬಿ, ತಾಲೂಕು ಎಂ.ಆರ್.ಡಬ್ಲೂ. ಮಹಾಂತೇಶ ಕುರ್ತಕೋಟಿ, ರಮೇಶ ಲಮಾಣಿ ಸೇರಿದಂತೆ ತಾಪಂ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಇತರರು ಭಾಗವಹಿಸಿದ್ದರು.