ಶಿಗ್ಗಾಂವಿ: ರೇಷ್ಮೆ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೀರಲಗಿ ಗ್ರಾಮದ ಬಳಿ ಭಾನುವಾರ ನಡೆದಿದೆ.
ಧಾರವಾಡ ತಾಲೂಕಿನ ಮಾರಡಗಿ ಗ್ರಾಮದ ಬಸವರಾಜ ಜಲಂದರ ಓಬನ್ನವರ (47) ಮೃತ ರೈತ.
ಇವರು ರೇಷ್ಮೆ ಬೆಳೆಯುವ ಸಲುವಾಗಿ ವಿವಿಧ ಬ್ಯಾಂಕ್‌ಗಳಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ರೇಷ್ಮೆ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.