ಯಳಂದೂರು ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದ ಪರಿಶಿಷ್ಟ ಜಾತಿಯ ಬಡಾವಣೆಯ ಚರಂಡಿಯಲ್ಲಿ ಹೂಳು ತುಂಬಿರುವುದು. 
ಜಿಲ್ಲೆ

ಆಲ್ಕೆರೆ ಅಗ್ರಹಾರದ ಚರಂಡಿಯಲ್ಲಿ ಹೂಳು !

ಯಳಂದೂರು : ತಾಲೂಕಿನ ಗೌಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲ್ಕೆರೆ ಅಗ್ರಹಾರ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚರಂಡಿಯಲ್ಲಿ ಹೂಳು ತುಂಬಿದ್ದು ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ಹಲವು ತಿಂಗಳಿಂದ ಚರಂಡಿ ಹೂಳನ್ನೇ ತೆಗೆದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಗೌಡಹಳ್ಳಿ ಪಂಚಾಯಿತಿಗೆ ದೂರು ಸಲ್ಲಿಸಿದ್ದರೂ ದುರಸ್ತಿಗೊಳಿಸಲು ಮೀನಮೇಷ ಎಣಿಸುತ್ತಿದ್ದಾರೆ. ಈಗ ಮಳೆಗಾಲವಾಗಿದೆ. ಮಳೆ ಬಂದರೆ ಈ ನೀರು ಇಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುತ್ತದೆ. ತ್ಯಾಜ್ಯ ನೀರು ಇದರಲ್ಲಿ ಸಂಗ್ರಹಗೊಂಡು ಇಡೀ ಪರಿಸರ ಕಲುಷಿತಗೊಂಡಿದೆ. ಅಲ್ಲದೆ ಸೊಳ್ಳೆ, ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಹೆಚ್ಚಿದೆ. ಈ ಬಗ್ಗೆ ತಾಲೂಕು ಆಡಳಿತ ಹಾಗೂ ಚುನಾಯಿತ ಜನಪ್ರತಿನಿಧಿಗಳು ಸೂಕ್ತ ಕ್ರಮ ವಹಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೋರಾಟ ರೂಪಿಸುವುದಾಗಿ ಗ್ರಾಮದ ಡಾ.ಎಸ್. ಶಿವಕುಮಾರ್ ಎಚ್ಚರಿಸಿದ್ದಾರೆ.

ಅಲ್ಕೆರೆ ಅಗ್ರಹಾರ ಗ್ರಾಮದಲ್ಲಿ 15 ದಿನಗಳ ಹಿಂದೆಯೆ ಜೆಸಿಬಿ ಮೂಲಕ ಪ್ರಮುಖ ಚರಂಡಿ ಸೇರಿದಂತೆ ಗ್ರಾಮದ ಚರಂಡಿಗಳ ಸ್ವಚ್ಛತೆಯನ್ನು ಕೈಗೊಳ್ಳಲಾಗಿದೆ. ಪರಿಶಿಷ್ಟ ಬಡಾವಣೆಯ ಯಾವ ಚರಂಡಿಯಲ್ಲಿ ಹೂಳು ತುಂಬಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು.
ರಮೇಶ್ಪಿ ಡಿಒ ಗೌಡಹಳ್ಳಿ ಗ್ರಾಪಂ