ಕೊಪ್ಪಳ: ರಜತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ಸಿರಿಧಾನ್ಯಗಳ ಜಾಗೃತಿ ನಡಿಗೆ ಸಾರ್ವಜನಿಕರ ಗಮನ ಸೆಳೆಯಿತು.
ನಮ್ಮ ನಡಿಗೆ ಸಿರಿಧಾನ್ಯಗಳ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಗವಿಮಠದ ಆವರಣದಿಂದ ಆರಂಭವಾಗಿ ಗಡಿಯಾರ ಕಂಬ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ನಡೆಯಿತು.
ಸಿರಿಧಾನ್ಯಗಳ ಬಗ್ಗೆ ರೈತರು ಸೇರಿದಂತೆ ಸಾರ್ವಜನಿಕರಿಗೆ ಮತ್ತು ಗ್ರಾಹಕರಿಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಜಿಲಾಡಳಿತ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಭಿನವ ಗವಿಸಿದ್ದೇಶ್ವರ ಶ್ರೀಗಳು, ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಕೃಷಿ ತಂತ್ರಜ್ಞರ ಸಂಸ್ಥೆಯ ಸದಸ್ಯ ವೀರಣ್ಣ ಕಮತರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.