ನಗರ ಮಂಡಲ ನೂತನ ಅಧ್ಯಕ್ಷರ ಪದಗ್ರಹಣ
ಸಿಂಧನೂರು: ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಜಿಪಂ, ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸಲು ಬದ್ಧರಾಗೋಣ ಎಂದು ಬಿಜೆಪಿ ವಿಭಾಗೀಯ ಪ್ರಭಾರಿ ಸಿದ್ದೇಶ ಯಾದವ ಹೇಳಿದರು.
ನಗರದ ಸತ್ಯಗಾರ್ಡನ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಭಾನುವಾರ ಆಯೋಜಿಸಿದ್ದ ನಗರ ಮಂಡಲ ಅಧ್ಯಕ್ಷರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಿಜೆಪಿಯನ್ನು ಬೇರುಸಮೇತ ಬಲಪಡಿಸುವ ಅವಶ್ಯಕತೆಯಿದೆ. ಕೇವಲ ಚುನಾವಣೆ ದೃಷ್ಟಿಯಿಂದ ಬೇಡ. ಇನ್ನೂ 25 ವರ್ಷ ಮುಂದಕ್ಕೆ ಸಾಗುವಂತೆ ಪಕ್ಷ ಸಂಘಟಿಸುವ ಕೆಲಸವಾಗಬೇಕಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಜನಪರ ಆಡಳಿತ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಿಯೂ ಹಣ ಸೋರಿಕೆ ಆಗದಂತೆ ಸರ್ಕಾರ ನಡೆಸಿದ ಕೀರ್ತಿ ಬಿಜೆಪಿಗಿದೆ ಎಂದು ಹೇಳಿದರು.