ಸಿಂಧನೂರಿನಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ಶುಕ್ರವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.  
ಜಿಲ್ಲೆ

ಕಟ್ಟಡ ಸಾಮಾಗ್ರಿಗಳ ಬೆಲೆ ನಿಯಂತ್ರಿಸಲು ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಷನ್ ಒತ್ತಾಯ

ಸಿಂಧನೂರು: ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ಶುಕ್ರವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಕಟ್ಟಡ ಉದ್ಯಮ ರಕ್ಷಿಸಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು 1996 ಹಾಗೂ ಸೆಸ್ ಕಾನೂನು 1996 ಕಾನೂನು ಮತ್ತೆ ಜಾರಿಗೊಳಿಸಬೇಕು. ದೇಶಾದ್ಯಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು. ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು. ಕಟ್ಟಡ ಸಾಮಾಗ್ರಿಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸಬೇಕು. ಕೋವಿಡ್‌ನಿಂದ ಮೃತಪಟ್ಟ ನೊಂದಾಯಿತ ಕಾರ್ಮಿಕರಿಗೆ ಪರಿಹಾರ ನೀಡಲು ಹಾಗೂ ಕೋವಿಡ್‌ನಿಂದ ಗುಣಮುಖರಾದ ಫಲಾನುಭವಿಗಳ ವೈದ್ಯಕೀಯ ವೆಚ್ಚ ಭರಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.

ಸಂಘಟನೆ ಅಧ್ಯಕ್ಷ ಶೇಕ್ಷಾಖಾದ್ರಿ, ಕಾರ್ಯದರ್ಶಿ ಅನ್ವರ್‌ಪಾಷಾ, ಮುಕ್ತಾರ್ ಅಹ್ಮದ್, ಯಂಕಪ್ಪ ಕೆಂಗಲ್, ಸಾಧಿಕ ಅನ್ಸಾರಿ, ಹನುಮೇಶ ಭಂಗತಿ, ವೆಂಕಟರಾಜು, ಮಾರುತಿ ಜವಳಗೇರಾ, ಅನ್ವರಪಾಷಾ ತುರುವಿಹಾಳ ಸೇರಿ ಹಲವರು ಇದ್ದರು.