ಸಿಂಧನೂರು: ತಾಲೂಕಿನ ಗಾಂಧಿನಗರದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಾಮಾನ್ಯಸಭೆಯಲ್ಲಿ ಪಿಡಿಒ ವರ್ತನೆ ಖಂಡಿಸಿ ಗ್ರಾಪಂ ಅಧ್ಯಕ್ಷ ದುರುಗಪ್ಪ ಸೇರಿ 26 ಸದಸ್ಯರು ಸಭೆ ಬಹಿಷ್ಕರಿಸಿ ಹೊರ ನಡೆದರು.
ಸಭೆ ಆರಂಭವಾಗುತ್ತಿದ್ದಂತೆ ಪಿಡಿಒ ಶೋಭಾರಾಣಿ ವಿರುದ್ಧ ಅಸಮಾಧಾನ ಹೊರಹಾಕಿದ ಸದಸ್ಯರು, ಪಿಡಿಒ ಕಚೇರಿಗೆ ಸರಿಯಾಗಿ ಬಾರದಿರುವುದು, ಅಭಿವೃದ್ಧಿ ಕೆಲಸ ಮಾಡದೆ ಇರುವುದು ಸೇರಿ ಸರ್ಕಾರದ ಯೋಜನೆಗಳ ಅನುಷ್ಠಾನ ಮಾಡುತ್ತಿಲ್ಲ ಎಂದು ಆರೋಪಿಸಿದರು. ಸದಸ್ಯರ ಮನವೊಲಿಸಲು ಪಿಡಿಒ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಆದರೆ ಪಿಡಿಒ ಹಾಗೂ ಸದಸ್ಯರ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಸಭೆ ನಡೆಯದಂತಾಯಿತು.