ಸಿಂಧನೂರು ತಹಸಿಲ್ ಕಚೇರಿ ಮುಂದೆ ಸಿಪಿಐ(ಎಂಎಲ್)ಲಿಬರೇಷನ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.  
ಜಿಲ್ಲೆ

ಅಗತ್ಯ ವಸ್ತುಗಳ ಬೆಲೆ ಇಳಿಸಿ

Raichur

ಸಿಂಧನೂರು: ಆಹಾರ ವಸ್ತುಗಳ ಮೇಲೆ ವಿಧಿಸಿರುವ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಇತರ ಅಗತ್ಯ ವಸ್ತುಗಳ ದರ ಇಳಿಸಬೇಕೆಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಷನ್‌ನಿಂದ ತಹಸಿಲ್ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಪರೋಕ್ಷವಾಗಿ ಯುದ್ಧ ಸಾರಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುವುದಾಗಿ ಹೇಳುತ್ತಿರುವ ಕೇಂದ್ರ ಸರ್ಕಾರ ಜನರಿಗೆ ತೆರಿಗೆಯ ಬರೆ ಹಾಕುವ ಮೂಲಕ ಉಡುಗೊರೆ ನೀಡಿರುವುದು ಜನದ್ರೋಹಿ ನೀತಿಯಾಗಿದೆ.

ವಿಪರೀತ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ರೂಪಾಯಿ ಮೌಲ್ಯ ಹಾಗೂ ಜಿಡಿಪಿ ಕುಸಿತ ಸಂದರ್ಭದಲ್ಲೇ ಜನರ ಜೀವನೋಪಾಯದ ಮೇಲೆ ಕ್ರೂರ ಪ್ರಹಾರ ನಡೆಸಲಾಗಿದೆ. ಸರ್ಕಾರದ ಈ ನೀತಿ ಬಡ ಮತ್ತು ಮಧ್ಯಮ ವರ್ಗದವರ ಬದುಕುವ ಹಕ್ಕನ್ನು ಬಲವಂತವಾಗಿ ಕಿತ್ತುಕೊಳ್ಳುವುದಾಗಿದೆ. ಈ ಕೂಡಲೇ ಜನದ್ರೋಹಿ, ಅವೈಜ್ಞಾನಿಕ ಮತ್ತು ಸಂವಿಧಾನ ವಿರೋಧಿ, ತೆರಿಗೆ ನೀತಿಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.