ಸಿಂಧನೂರಿನ ನಗರಸಭೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ದೀಪಾ. ಜಿ ಮನೇರಕರ್ ಮಂಗಳವಾರ ಉದ್ಘಾಟಿಸಿದರು. 
ಜಿಲ್ಲೆ

ಎಲ್ಲ ಕ್ಷೇತ್ರಗಳಲ್ಲಿ ಸ್ತ್ರೀಯರಿಂದ ಅದ್ವಿತೀಯ ಸಾಧನೆ

ಸಿಂಧನೂರು: ಮಹಿಳೆಯರು ಪುರುಷರಿಗೆ ಸರಿಸಮಾನರಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ದೀಪಾ ಜಿ.ಮನೇರಕರ್ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಪುರುಷರ ಯಶಸ್ಸಿಗೆ ಮಹಿಳೆಯರ ಸಹಕಾರ ಅಗತ್ಯವಾಗಿದ್ದು ಈ ಬಗ್ಗೆ ಪುರುಷರು ಆಲೋಚಿಸುವುದು ಒಳಿತು. ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಮಹಿಳೆಯರು ನೆಮ್ಮದಿಯಿಂದ ಇದ್ದಾಗ ಸುಖಿ ಕುಟುಂಬ, ನೆಮ್ಮದಿಯ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ತಿಳಿಸಿದರು.