ಸಿಂಧನೂರು: ನಗರದ ಗಂಗಾವತಿ ಮಾರ್ಗದಲ್ಲಿ ಶುಕ್ರವಾರ ಬೆಳಗಿನ ಜಾವ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ.
ರಾಯಚೂರು ಹತ್ತಿರದ ರಘುನಾಥನಹಳ್ಳಿಯ ರಾಚಪ್ಪ (51) ಮೃತ. ಬಸ್ ಹುಬ್ಬಳ್ಳಿಯಿಂದ ರಾಯಚೂರಿಗೆ ಹೊರಟಿದ್ದು, ಒಂಬತ್ತು ಜನ ಪ್ರಯಾಣಿಕರಿದ್ದರು. ಈ ಪೈಕಿ ಒಬ್ಬರಿಗೆ ಗಾಯವಾಗಿದೆ. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.