ಸಿಂಧನೂರು: ನಗರದಲ್ಲಿ ಕಳೆದ ಹಲವು ದಿನಗಳಿಂದ ಅಲೆದಾಡುತ್ತಿದ್ದ ಬುದ್ಧಿಮಾಂದ್ಯ ಮಹಿಳೆಗೆ ಶುಕ್ರವಾರ ಕಾರುಣ್ಯಾಶ್ರಮದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.
ಬಸ್ ನಿಲ್ದಾಣದ ಬಳಿ ಕುಳಿತಿದ್ದ ಬುದ್ಧಿಮಾಂದ್ಯ ಮಹಿಳೆಯನ್ನು ನಮ್ಮ ಕರ್ನಾಟಕ ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ, ಇಂದಿರಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಅವರು ನಮ್ಮ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ಹಾಗೂ ಕಾರುಣ್ಯ ನೆಲೆ ವೃದ್ಧಾಶ್ರಮದವರ ಗಮನಕ್ಕೆ ತಂದಿದ್ದಾರೆ.
ವೃದ್ಧಾಶ್ರಮದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮಹಿಳೆಗೆ ಕ್ಷೌರ ಮಾಡಿಸಿ ಬಟ್ಟೆ ಕೊಟ್ಟು ಆಶ್ರಮದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳೆಯನ್ನು ನಿಮ್ಹಾನ್ಸ್‌ಗೆ ದಾಖಲಿಸಲು ನಿರ್ಧರಿಸಲಾಗಿದೆ.