ಸಿಂಧನೂರಿನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಶಾಸಕ ಹಂಪನಗೌಡ ಬಾದರ್ಲಿ ಮಂಗಳವಾರ ಉದ್ಘಾಟಿಸಿದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಗದಗಿನ ಕೆವಿಎಸ್‌ಆರ್ ಕಾಲೇಜು ಪ್ರಾಚಾರ್ಯ ಸಿದ್ದು ಯಾಪಲಪರ್ವಿ ಕಾರಟಗಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಇದ್ದರು.  
ಜಿಲ್ಲೆ

ತಂತ್ರಜ್ಞಾನ ಬಳಸಿ ಶಿಕ್ಷಣದ ಗುಣಮಟ್ಟ ಸುಧಾರಿಸಿ, ಶಾಸಕ ಹಂಪನಗೌಡ ಬಾದರ್ಲಿ ಸಲಹೆ

ಕುರುವತ್ತಿ ಶ್ರೀಕಾಂತಪ್ಪ

ಸಿಂಧನೂರು: ಹೊಸ ಹೊಸ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಸತ್ಯಗಾರ್ಡನ್‌ನಲ್ಲಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾರಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

ಶಿಕ್ಷಕರ ವೃತ್ತಿ ಗೌರಯುತವಾಗಿದ್ದು ಜವಾಬ್ದಾರಿ ಹೆಚ್ಚಾಗಿರುತ್ತದೆ. ಸಾಕ್ಷರತಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಡಯಟ್ ಈ ರೀತಿ ಹೊಣೆಗಾರಿಕೆಯನ್ನು ಕ್ರೂಢೀಕರಣ ಮಾಡಿರುವುದು ಸರಿಯಲ್ಲ. ಶಿಕ್ಷಕರಿಗೆ ತರಬೇತಿ ನೀಡುವ ಅವಶ್ಯಕತೆಯಿಲ್ಲ. ವರೇ ಭವ್ಯ ಭಾರತದ ಪ್ರಜೆಗಳನ್ನು ತಯಾರಿಸುವ ಜ್ಞಾನ ಪಡೆದುಕೊಂಡಿದ್ದಾರೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮಹತ್ತರ ಹೊಣೆಗಾರಿಕೆ ಅವರು ನಿರ್ವಹಿಸಬೇಕು. ಈಗಾಗಲೇ ಕೆಕೆಆರ್‌ಡಿಬಿಯಿಂದ ಶಿಕ್ಷಣ ಸುಧಾರಣೆಗೆ ಶೇ.25 ಅನುದಾನ ಮೀಸಲಿಡಲಾಗುವುದು ಎಂದರು.

ಬಿಇಒ ಸೋಮಶೇಖರಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಒಗ್ಗಟ್ಟಾಗಿದ್ದೇವೆಂದು ಈ ಕಾರ್ಯಕ್ರಮದ ಮೂಲಕ ತೋರಿಸೋಣ. ಶಾಸಕರು ನಮ್ಮ ಬಗ್ಗೆ ಹೆಚ್ಚಿನ ವಿಶ್ವಾಸವಿಟ್ಟುಕೊಂಡಿದ್ದು ಮುಂದಿನ ದಿನಗಳಲ್ಲಿ ಎಲ್ಲ ವಿಧದಲ್ಲಿಯೂ ಶೈಕ್ಷಣಿಕ ಸುಧಾರಣೆಗೆ ಕಂಕಣ ತೊಡೋಣ ಎಂದರು.

ನಂತರ ಗದಗಿನ ಕೆವಿಎಸ್‌ಆರ್ ಕಾಲೇಜು ಪ್ರಾಚಾರ್ಯ ಸಿದ್ದು ಯಾಪಲಪರ್ವಿ ಕಾರಟಗಿ, ಶೈಕ್ಷಣಿಕ ಸಮಲೋಚನೆ ನಡೆಸಿಕೊಟ್ಟರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಮಲ್ಲಪ್ಪ, ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಲತಾಂಜಲಿ ಪಿ.ದೇಸಾಯಿ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಳಕಪ್ಪ ಗಡಾದ ಇತರರಿದ್ದರು.