ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಗುರುವಾರ ರಾಷ್ಟ್ರೀಯ ಡೆಂಘೆ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ ಗುಡಿ, ಸಂಗನಗೌಡ, ಆಸ್ಪತ್ರೆ ಮೇಲ್ವಿಚಾರಕ ಎಫ್.ಎ.ಹಣಗಿ ಇತರರಿದ್ದರು. 
ಜಿಲ್ಲೆ

ಡೆಂಘೆ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

ಸಿಂಧನೂರು: ಡೆಂಘೆ ರೋಗ ಹರಡದಂತೆ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಂಡು ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ ಹೇಳಿದರು.

ನಗರದ ಸಾರ್ವನಿಕ ಆಸ್ಪತ್ರೆ ಆವರಣದಲ್ಲಿ ಗುರುವಾರ ರಾಷ್ಟ್ರೀಯ ಡೆಂಘೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಡೆಂಘೆ ಆರಂಭಿಕ ಲಕ್ಷಣಗಳಾದ ತಲೆ ನೋವು, ವಿಪರೀತ ಜ್ವರ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮನೆಯ ಸುತ್ತಲು ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಸೊಳ್ಳೆ ಪರದೆ ಬಳಕೆ ಮಾಡಬೇಕು. ನಗರಸಭೆ ಕೂಡ ಸ್ವಚ್ಛತೆಗೆ ಆದ್ಯತೆ ನೀಡಿ, ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ ಗುಡಿ, ಸಂಗನಗೌಡ, ಆಸ್ಪತ್ರೆ ಮೇಲ್ವಿಚಾರಕ ಎಫ್.ಎ.ಹಣಗಿ, ಸಿಬ್ಬಂದಿ ದುರುಗಪ್ಪ, ವೀರಭದ್ರಪ್ಪ, ರಮೇಶ, ನಿಂಗಪ್ಪ, ಮಲ್ಲಪ್ಪ ಇದ್ದರು.