ಸಿಂಧನೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಹಸಿಲ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು. ಅಧ್ಯಕ್ಷ ಎಚ್.ವಿರುಪನಗೌಡ, ಕಾರ್ಯದರ್ಶಿ ಬಸವಂತರಾಯಗೌಡ, ಕಲ್ಲೂರು, ಶರಣಬಸವ ಇತರರಿದ್ದರು.  
ಜಿಲ್ಲೆ

ಬರ ಪರಿಹಾರ ನೀಡಲು ಒತ್ತಾಯ

ಸಿಂಧನೂರು: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ತಹಸಿಲ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಬಿತ್ತನೆ ಮಾಡಿದ ಸೂರ್ಯಕಾಂತಿ ಬೆಳೆ ಕೈಸೇರದೆ ನಾಶಪಡಿಸಲಾಗಿದೆ. ಈ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು. ಬರಪೀಡಿತ ತಾಲೂಕುಗಳ ರೈತರ ಮಕ್ಕಳ ವಿದ್ಯಾಭ್ಯಾಸದ ಶುಲ್ಕವನ್ನು ರದ್ದುಪಡಿಸಬೇಕು. ಆಹಾರಧಾನ್ಯಗಳ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು.

ಸಣ್ಣ, ಅತಿಸಣ್ಣ, ಮಧ್ಯಮ, ಬಡ ರೈತರ ರಾಷ್ಟ್ರೀಕೃತ, ಸಹಕಾರ ಬ್ಯಾಂಕ್‌ನ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಲಾಯಿತು. ರೈತ ಸಂಘದ ಅಧ್ಯಕ್ಷ ಎಚ್. ವಿರುಪನಗೌಡ, ಕಾರ್ಯದರ್ಶಿ ಬಸವಂತರಾಯಗೌಡ ಕಲ್ಲೂರು, ಶರಣಬಸವ, ಎಸ್.ದೇವೇಂದ್ರಗೌಡ ಇದ್ದರು.