ಜಿಲ್ಲೆ

ಚುನಾವಣಾ ಆಶಯ ಬುಡಮೇಲು; ಮಾಜಿ ಸಚಿವ ಎಚ್.ಕೆ.ಪಾಟೀಲ್ ಆರೋಪ

ಸಿಂಧನೂರು: ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಭಾರತೀಯ ಜನತಾ ಪಾರ್ಟಿ ಗಾಳಿ ತೂರಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಣ ಕೊಟ್ಟು ಶಾಸಕರನ್ನು ಖರೀದಿಸಿ ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಪ್ರತಾಪಗೌಡರು ಹಣಕ್ಕಾಗಿ ತನ್ನನ್ನೇ ಮಾರಿಕೊಂಡು ಕಾಂಗ್ರೆಸ್‌ಗೆ ದ್ರೋಹ ಬಗೆದಿದ್ದಾರೆ. ಈಗ ವಿಜಯೇಂದ್ರ ಬೆಂಬಲಿಗರು ಎಂಟು ದಿನಗಳ ಮೊದಲೇ ಯಾರ ಅಂಜಿಕೆ ಇಲ್ಲದೆ ಹಣ ಮತದಾರರಿಗೆ ಹಂಚುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಚುನಾವಣೆಯ ಆಶಯವನ್ನು ಬುಡಮೇಲು ಮಾಡಿದೆ. ತಕ್ಷಣವೇ ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ರಾಜ್ಯ-ರಾಷ್ಟ್ರ ಮಟ್ಟದ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇವೆ.

ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ನಂಜಯ್ಯನಮಠ, ಶಾಸಕ ಬಸವರಾಜ ಪಾಟೀಲ್ ಇಟಗಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿಮಲಿಕ್ ವಕೀಲ, ಪ್ರಧಾನ ಕಾರ್ಯದರ್ಶಿ ಅನಿಲಕುಮಾರ, ಟಿಎಪಿಸಿಎಂಎಸ್ ನಿರ್ದೇಶಕ ಸಂಜಯ್ ಪಾಟೀಲ್, ವೀರಭದ್ರಗೌಡ ಕಾನಿಹಾಳ, ಮಹೇಂದ್ರ ಇದ್ದರು.