ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂಜಿನಿಯರ್ಸ್‌ ಡೇ ಹಾಗೂ ಭಾರತರತ್ನ ಡಾ.ಸರ್ ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನಚರಣೆ ಕಾರ್ಯಕ್ರಮದಲ್ಲಿ 2015ರಿಂದ ಮಹಾವಿದ್ಯಾಲಯದಿಂದ ಪದವಿ ಪಡೆದು ಸರ್ಕಾರಿ ಸೇವೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಪ್ರಾಚಾರ್ಯ ಡಾ.ವಿ.ಜಿ.ಸಂಗಮ, ಅರುಣ ಮಠ, ಬಿ.ಎಸ್.ಪಾಟೀಲ ಇನ್ನಿತರರಿದ್ದರು.  
ಜಿಲ್ಲೆ

ಭವ್ಯಭಾರತದ ಕನಸು ಕಂಡಿದ್ದ ಸರ್‌ಎಂ.ವಿಶ್ವೇಶ್ವರಯ್ಯ

ವಿಜಯಪುರ : ವಿಶ್ವೇಶ್ವರಯ್ಯ ಅವರು ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಕೆಬಿಜೆಎನ್‌ಎಲ್ ಆಲಮಟ್ಟಿ ಡಿವಿಜನ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಬಿ.ಎಸ್.ಪಾಟೀಲ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂಜಿನಿಯರ್ಸ್‌ ಡೇ ಹಾಗೂ ಭಾರತರತ್ನ ಡಾ.ಸರ್ ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ಸಮೃದ್ಧವಾಗಿ, ಆರ್ಥಿಕವಾಗಿ, ಆಡಳಿತಾತ್ಮಕವಾಗಿ, ಕೈಗಾರಿಕೆ, ನೀರಾವರಿ ಹೀಗೆ ಹಲವಾರು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕರ್ನಾಟಕ ಇತಿಹಾಸದಲ್ಲಿ ಅವರ ಕೆಲಸ ಕಾರ್ಯಗಳು ಜನಮನ್ನಣೆ ಗಳಿಸಿವೆ. ಇಂದಿಗೂ ಶಾಶ್ವತವಾಗಿ ಕೆಲಸ ನಿರ್ವಹಿಸುತ್ತಿವೆ. ಉತ್ತರ ಕರ್ನಾಟಕದಲ್ಲಿ ಭದ್ರ ಮೇಲ್ದಂಡೆ ಯೋಜನೆ, ಭೂತನಾಳ ಕೆರೆ ಅವರು ಮಾಡಿದ ಕೆಲಸಗಳು ಶಾಶ್ವತವಾಗಿ ಕಾರ್ಯನಿರ್ವಹಿಸುತ್ತಲಿವೆ ಎಂದು ಸ್ಮರಿಸಿದರು.

ಇಂಜಿನಿಯರ್ ಅರುಣ ಮಠ ಮಾತನಾಡಿ, ಬರಪಿಡಿತ ಪ್ರದೇಶ ಎಂದೇ ಖ್ಯಾತಿ ಪಡೆದ ಉತ್ತರ ಕರ್ನಾಟಕ ಇಂದು ನೀರಾವರಿ ಕ್ಷೇತ್ರವಾಗಿ ಮಾರ್ಪಡುವ ಕನಸು ಈಡೇರಿದೆ. ಮಹಾವಿದ್ಯಾಲಯದಿಂದ ಗುಣಮಟ್ಟದ ಶಿಕ್ಷಣ ಪಡೆದು ಇಂಜಿನಿಯರ್‌ಗಳಾಗಿ ದೇಶ ಸೇವೆ, ಸಾರ್ವಜನಿಕ ಸೇವೆಯಲ್ಲಿ ಉತ್ತಮ ಹೆಸರು ಗಳಿಸಬೇಕು ಎಂದು ತಿಳಿಸಿದರು.

ಇದೇ ವೇಳೇ 2015ರಿಂದ ಮಹಾವಿದ್ಯಾಲಯದಿಂದ ಪದವಿ ಪಡೆದು ಸರ್ಕಾರಿ ಸೇವೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ವಿ.ಜಿ.ಸಂಗಮ ಅವರು ವಹಿಸಿದ್ದರು. ವಿಭಾಗದ ಮುಖ್ಯಸ್ಥರಾದ ಡಾ.ನವೀನ ದೇಸಾಯಿ, ಪ್ರೊ.ಎನ್.ಎಸ್.ಇನಾಮದಾರ, ತೌಕೀರ ಅಹಮದ ಮತ್ತಿತರರಿದ್ದರು.