ಜಿಲ್ಲೆ

ಹೊತ್ತಿ ಉರಿದ ಖಾಸಗಿ ಶಾಲಾ ವಾಹನ; 30ಕ್ಕೂ ಅಧಿಕ ವಿದ್ಯಾರ್ಥಿಗಳು ಪಾರು

Raghavendra Dandin

ಸಿರಗುಪ್ಪ: ನಗರದ ಹೊರವಲಯದ ಮಾರುತಿ ಪೆಟ್ರೋಲ್ ಬಂಕ್ ಬಳಿಯ ಎನ್‌ಎಚ್‌ನಲ್ಲಿ ಸಾಗುತ್ತಿದ್ದ ಖಾಸಗಿ ಶಾಲಾ ಬಸ್‌ನಲ್ಲಿ ಸೋಮವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು, ಆತಂಕದ ವಾತಾವರಾಣ ಸೃಷ್ಟಿಯಾಗಿತ್ತು.

ಬಸ್ ಚಾಲಕ ಸಮಯಪ್ರಜ್ಞೆ ಮೆರೆದು ಒಳಗಿದ್ದ 30ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಕೆಳಗಿಸಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ನಂತರ ವಿದ್ಯಾರ್ಥಿಗಳನ್ನು ಅದೇ ಶಾಲೆಯ ಮತ್ತೊಂದು ವಾಹನದಲ್ಲಿ ಕಳುಹಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ್ದಾರೆ.

ಈ ವೇಳೆ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪೊಲೀಸರು ಬಂದು ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಪಿಎಸ್‌ಐ ರಂಗಯ್ಯ ಭೇಟಿ ನೀಡಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.