ಸಿರಗುಪ್ಪ: ಕನ್ನಡ ನಾಡು, ನುಡಿ ರಕ್ಷಣೆಗಾಗಿ ಪ್ರತಿಯೊಬ್ಬರೂ ಶ್ರಮಿಸುವ ಅಗತ್ಯವಿದೆ. ಅನ್ಯ ಭಾಷೆಯನ್ನು ಗೌರವಿಸುವುದರೊಂದಿಗೆ ನಮ್ಮ ಭಾಷೆಯನ್ನು ಅಭಿವೃದ್ಧಿ ಪಡಿಸೋಣ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಮಾತೃಭಾಷೆಯಾದ ಕನ್ನಡವನ್ನು ನಾವು ಎಂದೂ ಮರೆಯಬಾರದು. ಇತರ ಭಾಷೆಗಳನ್ನು ತಿರಸ್ಕರಿಸದೆ ಗೌರವಿಸಬೇಕು. ಕರ್ನಾಟಕದ ಏಕೀಕರಣ, ನಾಡು-ನುಡಿ ರಕ್ಷಣೆಗಾಗಿ ಅನೇಕ ಮಹನೀಯರು ಶ್ರಮಿಸಿದ್ದು ಅವರ ಹಾದಿಯಲ್ಲಿ ನಾವು ನಡೆಯೋಣ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್ವರಿ, ಅಬಕಾರಿ ಸಿಪಿಐ ಕೀರ್ತನಾ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.