ಸಿರಗುಪ್ಪದ ಶಾಖಾ ಗ್ರಂಥಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಂಥಾಲಯ ಸಪ್ತಾಹ ಹಾಗೂ ಪುಸ್ತಕ ಪ್ರದರ್ಶನವನ್ನು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮೀ ಕಿರಣ್ ಉದ್ಘಾಟಿಸಿದರು.  
ಜಿಲ್ಲೆ

ಓದಿನಿಂದ ಜೀವನದ ಮೌಲ್ಯ ಹೆಚ್ಚಳ: ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮೀ ಕಿರಣ್ ಅಭಿಮತ

ಸಿರಗುಪ್ಪ: ವಿದ್ಯಾರ್ಥಿಗಳು ಗ್ರಂಥಾಲಯದ ಸದುಪಯೋಗ ಪಡೆದುಕೊಂಡು ಪುಸ್ತಕಗಳನ್ನು ಓದುವ ರೂಢಿ ಮಾಡಿಕೊಂಡಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮೀ ಕಿರಣ್ ಹೇಳಿದರು. ನಗರದ ಶಾಖಾ ಗ್ರಂಥಾಲಯದಲ್ಲಿ ಮಂಗಳವಾರ ಆಯೋಜಿಸಿದ ಗ್ರಂಥಾಲಯ ಸಪ್ತಾಹ ಹಾಗೂ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಯುವಕರು ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಬಳಸಿಕೊಂಡು ಅತ್ಯುತ್ತಮ ಸಾಧನೆ ಮಾಡಬೇಕು ಎಂದರು.