ಸಿರಗುಪ್ಪದಲ್ಲಿ ಡಿ.ದೇವರಾಜ ಅರಸು ಜನ್ಮದಿನ ಆಚರಿಸಲಾಯಿತು. ತಾಪಂ ಇಒ ಪವನ್‌ಕುಮಾರ್, ಬಿಸಿಎಂ ಅಧಿಕಾರಿ ಎ.ಗಾದಿಲಿಂಗಪ್ಪ, ಟಿಎಚ್‌ಒ ಡಾ.ಈರಣ್ಣ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲಿಂಗರಾಜ ರೆಡ್ಡಿ, ನಗರಸಭೆ ಸದಸ್ಯರಾದ ಗಣೇಶ, ಅಪ್ಪಾಜಿ ನಾಯಕ, ನಾಗರಾಜ ಇತರರಿದ್ದರು. 
ಜಿಲ್ಲೆ

ಕೈಗೊಂಡ ಪ್ರಮುಖ ನಿರ್ಧಾರಗಳು ಅನುಕೂಲ

ಸಿರಗುಪ್ಪ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೂರದೃಷ್ಟಿ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕ ಎಂ.ಸಿದ್ದಯ್ಯ ಹೇಳಿದರು.

ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಬಿಸಿಎಂ ಇಲಾಖೆ ಮತ್ತು ತಾಲೂಕು ಆಡಳಿತ ಭಾನುವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅರಸು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸಿದಿದ್ದರೆ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ಅರಸು ಅವರ ಕಟು ನಿರ್ಧಾರಗಳಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಟಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು ಎಂದರು.

ಶಾಸಕ ಬಿ.ಎಂ.ನಾಗರಾಜ ಮಾತನಾಡಿದರು. ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟ, ಪ್ರಬಂಧಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.