ಸಿರಿ ಹಬ್ಬ ಕ್ರೀಡಾಕೂಟವನ್ನು ಸಿರಿ ಸಂಸ್ಥೆ ಮಾನ್ಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ ಉದ್ಘಾಟಿಸಿದರು. ಮೂಡುಬಿದಿರೆ ಎಕ್ಸಲೆಂಟ್ ಕಾಲೇಜು ಚೇರ‌್ಮನ್ ಯುವರಾಜ್ ಜೈನ್, ಕೆನರಾ ಬ್ಯಾಂಕ್ ಮಂಗಳೂರು ಸರ್ಕಲ್ ಜನರಲ್ ಮ್ಯಾನೇಜರ್ ಬಿ.ಸುಧಾಕರ ಕೊಟ್ಟಾರಿ, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ ರಾಜೇಶ್ ಪೈ ಮತ್ತಿತರರಿದ್ದರು. 
ಜಿಲ್ಲೆ

ಸಿಬ್ಬಂದಿ ಪರಿಶ್ರಮದಿಂದ ಸಂಸ್ಥೆ ಪ್ರಗತಿ : ಯುವರಾಜ್ ಜೈನ್

ಸೌಮ್ಯ ಆರ್

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರಿ ಸಿಬ್ಬಂದಿಗಾಗಿ ಸಿರಿ ಕ್ಲಬ್ ವತಿಯಿಂದ ಸಿರಿ ಹಬ್ಬ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಶನಿವಾರ ಸಿರಿ ಕೇಂದ್ರ ಕಚೇರಿಯಲ್ಲಿ ಜರುಗಿತು.

ಮುಖ್ಯ ಅತಿಥಿ ಮೂಡುಬಿದಿರೆ ಎಕ್ಸಲೆಂಟ್ ಕಾಲೇಜು ಚೇರ‌್ಮನ್ ಯುವರಾಜ್ ಜೈನ್ ಮಾತನಾಡಿ, ಸಿರಿ ಅಂದರೆ ಚಿಗುರು. ಖಾವಂದರು, ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ, ಸಿರಿ ಎಂಡಿಯವರ ಮುಂದಾಳತ್ವದಲ್ಲಿ ನಡೆಯುತ್ತಿರುವ ಸಿರಿ ಸಂಸ್ಥೆ ಸದಾ ಚಿಗುರುತ್ತಿರಲಿ. ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಸಂಸ್ಥೆಯನ್ನು ಮುನ್ನಡೆಸುವ ಜತೆಗೆ ನಾವು ಬೆಳೆಯೋಣ. ಪೂಜ್ಯ ದಂಪತಿಯ ಮಹಿಳಾ ಸಬಲೀಕರಣದ ಕನಸು ನನಸಾಗಿಸುವ ನಿಟ್ಟಿನಲ್ಲಿ ಸಿರಿ ಎಂಡಿಯವರ ಜತೆ ಕೈಜೋಡಿಸಿ ಸಿರಿಯ ಕಂಪನ್ನು ಜಗತ್ತಿನಾದ್ಯಂತ ಪಸರಿಸೋಣ ಎಂದರು.

ಸಿರಿ ಸಂಸ್ಥೆ ಮಾನ್ಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ ಕ್ರೀಡಾಕೂಟ ಉದ್ಘಾಟಿಸಿದರು. ಕೆನರಾ ಬ್ಯಾಂಕ್ ಮಂಗಳೂರು ಸರ್ಕಲ್ ಜನರಲ್ ಮ್ಯಾನೇಜರ್ ಬಿ.ಸುಧಾಕರ ಕೊಟ್ಟಾರಿ, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ ರಾಜೇಶ್ ಪೈ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆ ಮಾನ್ಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ ಸ್ವಾಗತಿಸಿದರು. ಮುಖ್ಯ ಅತಿಥಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಳ, ಸಾಂಸ್ಕೃತಿಕ ಸ್ಪರ್ಧೆ ತೀರ್ಪುಗಾರರಾಗಿ ಆಗಮಿಸಿದ್ದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥ, ಐಟಿ ಕಾಲೇಜು ಗಣಿತ ವಿಭಾಗ ಮುಖ್ಯಸ್ಥ ಡಾ.ವಿದ್ಯಾ ಕೆ, ಗ್ರಂಥಾಲಯ ಅಧಿಕಾರಿ ಡಾ.ರಂಜಿತಾ, ಉಜಿರೆ ಸಂಧ್ಯಾ ಟ್ರೆಡರ‌್ಸ್ೂ ಮಾಲಕಿ ಅರ್ಚನಾ ರಾಜೇಶ್ ಪೈ ಸಿರಿ ಸಿಬ್ಬಂದಿಗೆ ಶುಭ ಹಾರೈಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಮೋಗರಾಜ್ ಉಪಸ್ಥಿತರಿದ್ದರು. ಸಿರಿ ಸಂಸ್ಥೆ ವಿವಿಧ ವಿಭಾಗಗಳ ಮೇಲಧಿಕಾರಿ, ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರಿ ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಲಾಯಿತು. ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಸಿಬ್ಬಂದಿಗೆ ಬಹುಮಾನ ವಿತರಿಸಲಾಯಿತು.

ಸಿರಿ ಬ್ರಾೃಂಡ್ ಮಾರುಕಟ್ಟೆ ವಿಭಾಗ ಸಲಹೆಗಾರ ವಿಶ್ವಜ್ಞಚಾರ್ ಸ್ವಾಗತಿಸಿ, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ ಪ್ರಸನ್ನ ಪ್ರಾಸ್ತಾವಿಕ ಮಾತನಾಡಿದರು. ಗೋದಾಮು ಪ್ರಬಂಧಕ ಜೀವನ್ ಕುಮಾರ್ ನಿರೂಪಿಸಿ, ಅಗರಬತ್ತಿ ವಿಭಾಗದ ಮೇಲ್ವಿಚಾರಕ ಸತೀಶ್‌ವಂದಿಸಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಅಮ್ಮನವರ ಕನಸಿನ ಕೂಸಾಗಿರುವ ಸಿರಿ ಸಂಸ್ಥೆ ಸಿಬ್ಬಂದಿಯ ಪರಿಶ್ರಮದಿಂದಾಗಿ ಇಂದು ಲಾಭದ ಹಾದಿಯಲ್ಲಿ ನಡೆಯುತ್ತಿದೆ. ಮುಂದಿನ ವರ್ಷ ಸಿರಿ ಹಬ್ಬವನ್ನು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಕಟ್ಟಡದಲ್ಲಿ ಆಚರಿಸುವಂತಾಗಲಿ. ಅದೇ ರೀತಿ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ.

ರಾಜೇಶ್ ಪೈ, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ