ಜಿಲ್ಲೆ

ಸಿರಿಧಾನ್ಯ ಆಹಾರದಿಂದ ಆರೋಗ್ಯ ಸಂರಕ್ಷಣೆ

Mangaluru - Hariprasad Rai


ಮಂಗಳೂರು : ಆರೋಗ್ಯ ಸಂರಕ್ಷಣೆಗೆ ಉತ್ತಮ ಸತ್ವಭರಿತ ಆಹಾರಗಳ ಅಗತ್ಯವಿದ್ದು, ಸಿರಿಧಾನ್ಯ ಆಹಾರವು ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ನಾಂದಿಯಾಗಲಿದೆ. ಸಿರಿಧಾನ್ಯದ ಖಾದ್ಯಗಳಿಗೆ ಸ್ವಸಹಾಯ ಸಂಘಗಳ ಮೂಲಕ ಮಾರುಕಟ್ಟೆಯನ್ನು ಒದಗಿಸುವ ಅಗತ್ಯವಿದೆ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಹೇಳಿದರು.
ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ ಪ್ರಯುಕ್ತ ಮಂಗಳವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ ಖಾದ್ಯಗಳ ತಿನಿಸುಗಳು ತಯಾರಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ, ಉಪ ಕೃಷಿ ನಿರ್ದೇಶಕಿ ಕುಮುದಾ ಸಿ.ಎನ್, ಪುತ್ತೂರು ಉಪ ಕೃಷಿ ನಿರ್ದೇಶಕ ಶಿವಶಂಕರ.ಎಚ್ ದಾನೆಗೊಂಡಾರು, ಮಂಗಳೂರು ತಾ. ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್ ಉಪಸ್ಥಿತರಿದ್ದರು
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ತಾವು ತಯಾರಿಸಿದ ಖಾದ್ಯಗಳನ್ನು ಪ್ರದರ್ಶಿಸಿದರು. ಪುರುಷರು ಕೂಡಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರ ವಿವರ :
ಸಿರಿಧಾನ್ಯ ಖಾರಾ ಖಾದ್ಯಗಳ ವಿಭಾಗ : 1.ಜಯಶ್ರೀ, 2.ಸಂಧ್ಯಾ, 3.ಗೋವಿಂದ ರಾಜೇ.
ಸಿರಿಧಾನ್ಯ ಸಿಹಿ ಖಾದ್ಯಗಳ ವಿಭಾಗ : 1. ಶಶ್ಮಿ ಭಟ್, 2.ರೋಹಿಣಿ, 3. ಗೀತಾ
ಮರೆತುಹೋದ ಖಾದ್ಯಗಳ ವಿಭಾಗ : 1. ಸುನೀತಾ ಹರೀಶ್, 2. ಚಂದ್ರಕಲಾ, 3. ರೂಪಕಲಾ ಎಸ್. ಆಳ್ವ.