ಹಗರಿಬೊಮ್ಮನಹಳ್ಳಿಯಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಟಿ.ಆರ್.ಮಂಜುಳಾ, ಸಂಚಾಲಕಿ ಸುಜಾತಾ, ಶರಣಮ್ಮ, ರಾಧಾ ಇತರರಿದ್ದರು. 
ಜಿಲ್ಲೆ

ಸಿರಿಧಾನ್ಯಗಳಿಂದ ಆರೋಗ್ಯ ವೃದ್ಧಿ

Kopala - Desk - Eraveni

ಹಗರಿಬೊಮ್ಮನಹಳ್ಳಿ: ಸಿರಿಧಾನ್ಯಗಳಲ್ಲಿ ನಾರಿನ ಅಂಶ ಹೆಚ್ಚಿರುವುದರಿಂದ ಬಳಸಿದಲ್ಲಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

ಪಟ್ಟಣದ ಶ್ರೀ ಪತ್ರಿ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಎಸ್‌ಕೆಡಿಆರ್‌ಡಿಪಿ ಆಯೋಜಿಸಿದ್ದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದೆ ಸಾವಯವ ಗೊಬ್ಬರ ಮೂಲಕ ಸಿರಿಧಾನ್ಯ ಬೆಳೆಯುತ್ತಿದ್ದರು. ಆಗ ಮಾರಾಟಗಾರರು ಕಡಿಮೆ ಸಂಖ್ಯೆಯಲ್ಲಿದ್ದರು.

ಪ್ರಸ್ತುತ ದಿನಗಳಲ್ಲಿ ಹೆಚ್ಚಿದ್ದು, ಬೆಳೆಗಾರರ ಸಂಖ್ಯೆ ಕಡಿಮೆಯಾಗಿದೆ. ಆಹಾರ ಸೇವಿಸುವ ಕ್ರಮ ಬದಲಾವಣೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಬಿಪಿ, ಶುಗರ್, ಹೆಣ್ಣುಮಕ್ಕಳಿಗೆ ಗರ್ಭಕೋಶ ಸಂಬಂಧಿತ ಸಮಸ್ಯೆ ಎದುರಿಸುತ್ತಿದ್ದಾರೆ.

ಸಿರಿಧಾನ್ಯಗಳನ್ನು ಬಳಸಿ ಉತ್ತಮ ಆರೋಗ್ಯ ಪಡೆಯಿರಿ ಎಂದರು. ಯೋಜನಾಧಿಕಾರಿ ಟಿ.ಆರ್.ಮಂಜುಳಾ, ಸಂಘದ ಸಂಚಾಲಕಿ ಸುಜಾತಾ, ಸದಸ್ಯರಾದ ಶರಣಮ್ಮ, ರಾಧಾ, ರೇಖಾ, ಸವಿತಾ, ಶಾಂತಮ್ಮ ಇತರರಿದ್ದರು.