ಕಾರವಾರ: ಬ್ಲ್ಯಾಕ್ ಮೇಲ್, ವಂಚನೆ ಪ್ರಕರಣದಲ್ಲಿ ಭಾಗಿಯಾದ ಶಿರಸಿಯ ನಕಲಿ ಪತ್ರಕರ್ತರಾದ ರವೀಶ ಹೆಗಡೆ, ಗಣೇಶ ಆಚಾರಿ ಹಾಗೂ ಆರ್‌ಟಿಐ ಕಾರ್ಯಕರ್ತ ಓಂ ಹೆಗಡೆ ಅವರನ್ನು ಪೊಲೀಸ್ ಅಧಿಕಾರಿಗಳು ರಕ್ಷಿಸುವ ಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಸಂಯೋಜಕ ನಾಗರಾಜ ನಾರ್ವೇಕರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪೊಲೀಸರು ಆರೋಪಿಗಳನ್ನು ರಕ್ಷಣೆಗೆ ಯತ್ನಿಸುತ್ತಿದ್ದಾರೆ ಎಂಬುದನ್ನು ಮೇಲ್ನೋಟಕ್ಕೆ ಸಾಕ್ಷೀಕರಿಸುವ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದರು. ಶಿರಸಿ ಜ್ಯುವೆಲರಿ ಅಂಗಡಿ ಮಾಲೀಕ ಪ್ರಕಾಶ ಪಾಲನಕರ್ ಅವರ ಪುತ್ರ ಪ್ರೀತಂ ಪಾಲನಕರ್ (36)ಮೇ 15 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ನಕಲಿ ಪತ್ರಕರ್ತರಿಬ್ಬರು ಹಾಗೂ ಓಂ ಹೆಗಡೆ ಬ್ಲ್ಯಾಕ್ ಮೇಲ್ ಮಾಡಿ, ಹಣಕ್ಕಾಗಿ ಪೀಡಿಸುತ್ತಿರುವುದೇ ಪ್ರೀತಂ ಪಾಲನಕರ್ ಅವರ ಆತ್ಮಹತ್ಯೆಗೆ ಕಾರಣ ಎಂಬುದು ಅವರ ಮನೆಯವರಿಂದ ತಿಳಿದು ಬಂತು.
ಪ್ರೀತಮ್ ಆತ್ಮಹತ್ಯೆ ಮಾಡಿಕೊಂಡ ದಿನ ಬ್ಲ್ಯಾಕ್ ಮೇಲರ್‌ಗಳ ವಿರುದ್ಧ ದೂರು ನೀಡಲು ಹೋದರೆ, ಪೊಲೀಸರು ಅದನ್ನು ಸ್ವೀಕರಿಸಲಿಲ್ಲ ಎನ್ನಲಾಗಿದೆ. ನಂತರ ನಾನು ಹಾಗೂ ಶಾಸಕ ಭೀಮಣ್ಣ ನಾಯ್ಕ ಸ್ವತಃ ಮೃತರ ಮನೆಗೆ ತೆರಳಿ ಧೈರ್ಯ ತುಂಬಿದೆವು. ಸ್ವತಃ ನಿಂತು ಅವರ ವಿರುದ್ಧ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಮೃತರ ಸಂಬಂಧಿಕರಿಂದ ದೂರು ಕೊಡಿಸಿದ್ದೇನೆ. ಎಫ್‌ಐಆರ್ ಕೂಡ ದಾಖಲಾಗಿದೆ.
ಶಿರಸಿಯಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟಿದೆ. ನಮ್ಮ ಸರ್ಕಾರಕ್ಕೆ, ಸಚಿವರಿಗೆ, ಶಾಸಕರ ಹೆಸರಿಗೆ ಕುಂದು ಬರುವ ರೀತಿಯಲ್ಲಿ ಪೊಲೀಸ್ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಅಪರಾಽಗಳನ್ನು ರಕ್ಷಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದು, ಅಂಥ ಅಽಕಾರಿಗಳ ವಿರುದ್ಧ ಕ್ರಮ ವಹಿಸಬೇಕು.ನಾಗರಾಜ ನಾರ್ವೇಕರ್ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಸಂಯೋಜಕ