ಸಿರವಾರ: ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಪಿ.ಪೃಥ್ವಿ ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಿಕ್ಷಣ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ 17 ವರ್ಷದೊಳಗಿನ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪೃಥ್ವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕರಾಟೆ ತರಬೇತುದಾರ ಸಾಯಿ ಪವನ್ ರೆಡ್ಡಿ, ಶಿಕ್ಷಕರು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.