ಬಸವವೇಶ್ವರ, ಶಂಕರಾಚಾರ್ಯರು, ಭಗೀರಥ, ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ನಿಮಿತ್ತ ಸಿರವಾರ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ ರವಿ.ಎಸ್, ಅಂಗಡಿ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಪ.ಪಂ.ಅಧ್ಯಕ್ಷ ವೈ.ಭೂಪನಗೌಡ, ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಸಿಡಿಪಿಒ ನಾಗರತ್ನ ನಾಯಕ, ಎಇಇಗಳಾದ ವಿಜಯಲಕ್ಷ್ಮೀ ಪಾಟೀಲ್, ಎಂ.ಡಿ.ಸಲೀಂ ಇದ್ದರು. 
ಜಿಲ್ಲೆ

ಬಸವ ಜಯಂತಿ ಅದ್ದೂರಿಯಾಗಿ ಆಚರಿಸೋಣ

ಸಿರವಾರ: ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಬಸವೇಶ್ವರ, ಶಂಕರಾಚಾರ್ಯರು, ಭಗೀರಥ, ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಏ.30ರ ಬೆಳಗ್ಗೆ ಎಲ್ಲ ಕಚೇರಿಗಳಲ್ಲಿ ಬಸವ ಜಯಂತಿ ಆಚರಣೆ ಮಾಡಬೇಕು. ತಾಲೂಕು ಆಡಳಿತ ಹಾಗೂ ಸಮಾಜದಿಂದ ಸಂಜೆ ಈಶ್ವರ ದೇವಸ್ಥಾನದಿಂದ ಬಸವ ವೃತ್ತದವರೆಗೆ ಬಸವೇಶ್ವರ ಭಾವಚಿತ್ರ ಮೆರವಣಿಗೆ ಮಾಡಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ತಪ್ಪದೆ ಭಾಗವಹಿಸಬೇಕು. ತಾಲೂಕಿನ ಪ್ರತಿ ಸರ್ಕಾರಿ ಕಚೇರಿಯಲ್ಲಿ ಮಹನೀಯರ ಜಯಂತಿ ಕಡ್ಡಾಯವಾಗಿ ಆಚರಿಸಬೇಕೆಂದು ಸೂಚಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ವೈ.ಭೂಪನಗೌಡ, ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ನೀರಾವರಿ ಇಲಾಖೆ ಎಇಇ ವಿಜಯಲಕ್ಷ್ಮೀ ಪಾಟೀಲ್, ಸಿಡಿಪಿಒ ನಾಗರತ್ನ ನಾಯಕ, ಜೆಸ್ಕಾಂ ಎಇಇ ಎಂ.ಡಿ.ಸಲೀಂ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.