ಸಚಿವ ಮಧು ಬಂಗಾರಪ್ಪ  
ಜಿಲ್ಲೆ

ಗ್ಯಾರಂಟಿಗೆ ಸಹೋದರಿಯ ಸಲಹೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರನ್ನು ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಕಣಕ್ಕಿಳಿಸಲು ಪರೋಕ್ಷವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂಗಿತ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಮಾತನಾಡಿದ ಅವರು, ಗೀತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತೆ. ಅವರು ಶಿವಮೊಗ್ಗ ಮಾತ್ರವಲ್ಲದೆ ಬಳ್ಳಾರಿ, ಮೈಸೂರು, ರಾಯಚೂರು ಸೇರಿ ಹಲವೆಡೆ ಪಕ್ಷದ ಪರ ಕೆಲಸ ಮಾಡಿದ್ದಾರೆ ಎಂದರು. ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷನಾಗಿ ಗ್ಯಾರಂಟಿಗಳ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದೆ. ಅವರೂ ಅನೇಕ ಸಲಹೆಗಳನ್ನು ಕೊಟ್ಟಿದ್ದರು. ದ್ವಿತೀಯ ಪಿಯುಸಿ ಆದ ಬಳಿಕ ಸರ್ಕಾರದಿಂದಲೇ ನೀಟ್ ಪರೀಕ್ಷೆಗೆ ತರಬೇತಿ ನೀಡುವುದು ಅದರಲ್ಲಿ ಒಂದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯಿಂದ ಅನೇಕರು ಅರ್ಜಿ ಹಾಕಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ವರಿಷ್ಠರ ತೀರ್ಮಾನಕ್ಕೆ ಬಿಡಲಾಗಿದೆ ಎಂದರು.