ಜಿಲ್ಲೆ

ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಡೆಸ್ಕ್

ಆನೇಕಲ್​: ತಾಲೂಕಿನ ಎಲ್ಲ ಸರ್ಕಾರಿ ಇಲಾಖೆಗಳು ಒಂದೇ ಸೂರಿನಡಿ ದೊರೆಯಬೇಕು ಎಂಬ ನಿಟ್ಟಿನಲ್ಲಿ ಆನೇಕಲ್​ನಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಾಣಕ್ಕೆ ತಹಸೀಲ್ದಾರ್​ ಶಶಿಧರ್​ ಮಾಡ್ಯಾಳ್​ ಸ್ಥಳ ಪರಿಶೀಲಿಸಿದರು.

ೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣಕ್ಕೆ ಹೊಂದಿಕೊಂಡಿರುವ 2 ಎಕರೆ ಸರ್ಕಾರಿ ಜಾಗದಲ್ಲಿ ಮಿನಿ ವಿಧಾಸೌಧ ನಿರ್ಮಿಸಲು ಸಿದ್ಧತೆ ನಡೆಸಿದ್ದು, ಜಾಗವನ್ನು ತಾಲೂಕು ಆಡಳಿತ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು. ರಾಜಧಾನಿಗೆ ತಾಲೂಕು ಸಮೀಪದಲ್ಲಿರುವುದರಿಂದ ಮಿನಿ ವಿಧಾನಸೌಧದ ಅವಶ್ಯಕತೆ ಇದೆ. ಇದರಿಂದ ಬಾಡಿಗೆ ಕಟ್ಟಡದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ಮಿನಿ ವಿಧಾನಸೌಧ ನಿರ್ಮಾಣದಿಂದಾಗಿ ಸಾರ್ವಜನಿಕರು ವಿವಿಧ ಕೆಲಸ ಕಾರ್ಯಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ. ತಾಲೂಕಿನ ಹಲವು ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪನೊಂದಾಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ರೇಷ್ಮೇ ಇಲಾಖೆಯ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿದೆ.

ಪಟ್ಟಣದ ತಾಲೂಕು ಕಚೇರಿಯಲ್ಲಿ ಭೂಮಾಪನ ಇಲಾಖೆ, ಆಹಾರ ಇಲಾಖೆಗಳ ಕೊಠಡಿಗಳು ಕಿರಿದಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಸುಸಜ್ಜಿತ ಕಟ್ಟಡ ದೊರೆಯುವುದರಿಂದ ಎಲ್ಲ ಇಲಾಖೆಗಳಿಗೂ ಅನುಕೂಲವಾಗಲಿದೆ. ವಿವಿಧ ಕೆಲಸ ಕಾರ್ಯಗಳಿಗಾಗಿ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರು ರಸ್ತೆ ಬದಿಯಲ್ಲಿಯೇ ವಾಹನ ನಿಲ್ಲಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಸಾರ್ವಜನಿಕರು ಪ್ರತಿನಿತ್ಯ ಪರದಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಾಲೂಕಿಗೆ ಮಿನಿ ವಿಧಾನಸೌಧ ಅವಶ್ಯಕತೆಯಿದೆ.

ಮಿನಿ ವಿಧಾನಸೌಧಕ್ಕೆ ಶಾಸಕ ಬಿ.ಶಿವಣ್ಣ ಜಾಗ ಗುರುತಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಲಾಗಿದೆ. ಪಟ್ಟಣದಲ್ಲಿ 2 ಎಕರೆ ಮಿನಿ ವಿಧಾನಸೌಧಕ್ಕೆ ಸೂಕ್ತವಾಗಿದೆ. > ಶಶಿಧರ್​ ಮಾಡ್ಯಾಳ್​ ತಹಸೀಲ್ದಾರ್​ ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿವೆ. ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ. ಎಲ್ಲ ಕಚೇರಿಗಳು ಒಂದೇ ಸೂರಿನಡಿ ದೊರೆಯುವಂತಾಗಲು ಮಿನಿ ವಿಧಾನಸೌಧ ಅಗತ್ಯಕ. > ಎನ್​.ಎಸ್​.ಪದ್ಮನಾಭ ಪುರಸಭಾ ಸದಸ್ಯ