ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯ ಈಜು ತರಬೇತುದಾರರಾದ ಭವಾನಿ ಜೋಗಿ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಓಪನ್ ಮಾಸ್ಟರ್ಸ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 6 ಚಿನ್ನದ ಪದಕ ಗೆದ್ದಿದ್ದಾರೆ. ಶಾಟ್‌ಪುಟ್, ಡಿಸ್ಕಸ್ ಥ್ರೋ, ಲಾಂಗ್ ಜಂಪ್ ಮತ್ತು ಟ್ರಿಪಲ್ ಜಂಪ್‌ನಲ್ಲಿ ವೈಯಕ್ತಿಕ ಚಿನ್ನ ಹಾಗೂ ಮಹಿಳೆಯರ 4 100 ಮೀ.ರಿಲೇ ಮತ್ತು 4100 ಮೀ.ಮಿಶ್ರ ರಿಲೇಯಲ್ಲಿ ಚಿನ್ನದ ಪದಕ ಗೆದ್ದರು.ನೇಪಾಳದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕೂಟಕ್ಕೆ ಇವರು ಆಯ್ಕೆಯಾಗಿದ್ದಾರೆ.