ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಆಟಿದ ಲೇಸ್ ಕಾಡಬೆಟ್ಟು ಶಾಲೆಯಲ್ಲಿ ನಡೆಯಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಉದ್ಘಾಟಿಸಿ, ಹಿಂದಿನ ಕಾಲದಲ್ಲಿ ಬಡತನವಿದ್ದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಎಲ್ಲರೂ ಬಡತನದಿಂದ ಹೊರಗಡೆ ಬಂದಿದ್ದಾರೆ, ಆದರೆ ಆಧುನಿಕ ಜೀವನದಲ್ಲಿ ಸಂತೋಷ, ಆರೋಗ್ಯ, ನೆಮ್ಮದಿ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ವಗ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾಹಿತಿ ನೀಡಿದರು.
ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯಶಿಕ್ಷಕಿ ಮೋಹಿನಿ ಕುಮಾರಿ ಯು., ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ ಚಂದಪ್ಪ ಮೂಲ್ಯ, ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್.ಶೆಟ್ಟಿ ನಿರೂಪಿಸಿದರು.