ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌದಲ್ಲಿ ಡಿ.9 ರಿಂದ 20ರವರೆಗೆ ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಈ ಅಧಿವೇಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂದಾನಗರಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಹಾಗೂ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಅಗಮಿಸುತ್ತಿರುವ ಹಿನ್ನಲೆಯಲ್ಲಿ ಪೇಟಿಂಗ್ ಹಾಗೂ ಕ್ಲಿನಿಂಗ್ ಗೆ ಹೆಚ್ಚು ಹಣ ನೀಡಲಾಗುತ್ತಿದೆ ಎಂದರು.
.