ಜಿಲ್ಲೆ

ಸಿ.ಟಿ.‌ರವಿ ಪ್ರಕರಣದಲ್ಲಿ  ಪೊಲೀಸರು ನನ್ನ ಮಾತು ಕೇಳಲಿಲ್ಲ; ಸಚಿವ ಸತೀಶ ಜಾರಕಿಹೊಳಿ ಬೇಸರ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ವಿಧಾನಪರಿಷತ್ ನ ಸದಸ್ಯ ಸಿ.ಟಿ ರವಿ ಕೇಸ್‌ ಮುಂದುವರೆಸುವುದರಲ್ಲಿ ಅರ್ಥವಿಲ್ಲ. ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ನಂಗೆ ಗೊತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಅವರನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೇಲ್ಲ ಆಗುತ್ತಿರಲಿಲ್ಲ, ಸಿಟಿ ರವಿ ಅವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಪೊಲೀಸರು ಅವರನ್ನು ರೌಂಡ್ಸ್‌ ಹೊಡಿಸಿದ್ದಾರೆ ಎಂದರು.

ಈಗಾಗಲೇ ಘಟನೆ ಆಗಿ ಹೋಗಿದೆ, ಮತ್ತೆ ಮುಂದುವರಿಸುವದರಲ್ಲಿ ಅರ್ಥ‌ ಇಲ್ಲ. ದೇಶದಲ್ಲಿ ಇಂಥ ಘಟನೆಗಳು ಹೊಸದಲ್ಲ, ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ, ಈಗಲೂ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ .ಇದರಲ್ಲಿ ಬೇರೆ ಯಾವ ಉದ್ದೇಶ ಇಲ್ಲ, ಈ ಪ್ರಕರಣ ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ಅವರು ಅವಾಚ್ಯ ಶಬ್ದ ಬಳಿಸಿಲ್ಲವೆಂದು ಹೇಳುತ್ತಿದ್ದಾರೆ. ಹೀಗಾಗಿ ಈ ಕೇಸ್‌ ಇಲ್ಲಿಗೆ ಮುಗಿಸದರೆ ಒಳ್ಳೆಯದು. ಬೆಳಗಾವಿ ಸುವರ್ಣ ವಿಧಾನಸೌದಲ್ಲಿ ಇಂತಹ ಪ್ರಕರಣ ಈ ಹಿಂದೆ ಆಗಿರಲ್ಲಿಲ್ಲ ಎಂದರು.