ಜಿಲ್ಲೆ

ಸಣ್ಣ ಕೈಗಾರಿಕೆಗಳಿಗೆ ಸಿಗುವ ಸವಲತ್ತುಗಳ ಕುರಿತ ಅರಿವು ಮೂಡಿಸುವ ಕಾರ್ಯಕ್ರಮ ನಾಳೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಸೆ.೧೬ ರಮದು ಬೆಳಗ್ಗೆ ೧೦-೩೦ ಗಂಟೆಗೆ ಕಲಬುರಗಿ ನಗರದ ಸಾರ್ವಜನಿಕ ಉದ್ಯಾನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ ತಿಳಿಸಿದರು.
ವಾಣಿಜ್ಯ ಮತ್ತು ಕೈಗಾರಿಕೆ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಸಂಘ, ಬ್ಯಾಂಕ್ ಆಫ್ ಇಂಡಿಯಾÀ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸುವರು. ಬಳಿಕ ಹಣಕಾಸು ಯೋಜನೆಗಳು, ಉಧ್ಯಮ ಪ್ರಮಾಣೀಕರಣ, ಉದ್ಯಮ ಸಹಾಯ ವೇದಿಕೆ, ಡಿಜಿಟಲ್, ಸ್ಥಳೀಯ ಬ್ಯಾಂಕುಗಳಿAದ ದೊರೆಯುವ ಹಣಕಾಸು ಯೋಜನೆಗಳು, ಸ್ವಯಂ ಉದ್ಯೋಗ ಹಾಗೂ ಜವಳಿ ಇಲಾಖೆ ವತಿಯಿಂದ ಕಾರ್ಯಗಾರ ನಡೆಯಲಿವೆ ಎಂದು ತಿಳಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮ  ಆಯೋಜಿಸಲಾಗುತ್ತಿದೆ ಎಂದು ಹೇಳಿದರು.