ವಿಟ್ಲ: ವಿಟ್ಲ ಸರ್ಕಾರಿ ಪ್ರೌಢಶಾಲೆಯ ಪ್ರಾಥಮಿಕ ವಿಭಾಗಕ್ಕೆ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ವತಿಯಿಂದ ನೀಡಲಾದ ಸ್ಮಾರ್ಟ್ ಟಿವಿ ಉದ್ಘಾಟನೆಯನ್ನು ಸಂಸ್ಥೆಯ ತಾಂತ್ರಿಕ ಅಧಿಕಾರಿ ಪ್ರವೀಣ್ ಕ್ಯಾಸ್ಟಲಿನೊ ನಡೆಸಿ ಮಾದರಿ ಪಾಠವನ್ನು ವೀಕ್ಷಿಸಿದರು.
ಅಧ್ಯಕ್ಷತೆ ವಹಿಸಿದ ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಶಾಸಿ, ಕಲಿಕೆಗೆ ತಾಂತ್ರಿಕ ಸಹಕಾರವನ್ನಿತ್ತ ಸಂಸ್ಥೆಯನ್ನು ಅಭಿನಂದಿಸಿದರು. ‘ಚಿತ್ರ-ಚಿತ್ತಾರ’ 2023-24ರ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸಂಸ್ಥೆಯ ಹಿರಿಯ ಅಧಿಕಾರಿ ಜೋಬಿನ್ ಜೋಸ್, ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಲು ಸಹಕರಿಸಿದ ಜತ್ತಪ್ಪ ಗೌಡ, ವೇದಾಂತ್, ಪ್ರೌಢ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷೆ ರಶ್ಮಿ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ರವಿಪ್ರಕಾಶ್ ವಿಟ್ಲ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಕೆ., ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಸದಾಶಿವ ನಾಯಕ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಚಿಂತನಾ, ಹಂಸಿನಿ, ಪ್ರತೀಕ್ಷಾ ಮತ್ತು ಶ್ರದ್ಧಾರುಕ್ಮಿಣಿ ಕಾರ್ಯಕ್ರಮ ನಿರ್ವಹಿಸಿದರು.