ಬೆಟಗೇರಿ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಕರೊನಾ ಮುಂಜಾಗ್ರತಾ ಸಭೆಯಲ್ಲಿ ಗ್ರಾಪಂ ನೋಡಲ್ ಅಧಿಕಾರಿ ಜಿ.ಬಿ. ಬಳಿಗಾರ ಮಾತನಾಡಿದರು. ಈಶ್ವರ ಬಳಿಗಾರ, ಎಚ್.ಎನ್. ಬಾವಿಕಟ್ಟಿ, ಜೆ.ಎಂ. ನದಾಫ್ ಇತರರು ಇದ್ದರು. 
ಜಿಲ್ಲೆ

ಸಾಮಾಜಿಕ ಅಂತರ ಕಾಯ್ದುಕೊಳ್ಳಿ

Belagavi

ಬೆಟಗೇರಿ: ಗ್ರಾಮದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಕರೊನಾ ನೋಡಲ್ ಅಧಿಕಾರಿ ಜಿ.ಬಿ. ಬಳಿಗಾರ ಹೇಳಿದರು.

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರೊನಾ ವೈರಸ್ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿದ ಅವರು, ಕರೊನಾ ಸೋಂಕು ಬಗ್ಗೆ ಭಯಪಡದೆ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವಂತೆ ತಿಳಿಸಿದರು. ಮಹಾಮಾರಿ ಕರೊನಾ ವೈರಸ್ ತಡೆಯಲು ಮುಂಜಾಗ್ರತವಾಗಿ ಗ್ರಾಮದಲ್ಲಿ ಕೈಗೊಂಡ ಕ್ರಮಗಳು ಹಾಗೂ ಸ್ಥಳೀಯ ಸಾರ್ವಜನಿಕರ ಸ್ಥಿತಿಗತಿ, ಸೌಲಭ್ಯಗಳ ಕೊರತೆ ಕುರಿತು ಪಿಡಿಒ, ಅಧ್ಯಕ್ಷ, ಸದಸ್ಯರು ಹಾಗೂ ಪಿಎಚ್‌ಸಿ ವೈದ್ಯಾಧಿಕಾರಿ, ಸಿಬ್ಬಂದಿಯೊಂದಿಗೆ ಚರ್ಚಿಸಿದರು.

ಜನಜಾಗೃತಿ ಕಾರ್ಯಕ್ಕೆ ಮೆಚ್ಚುಗೆ: ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ವಿವಿಧ ಕಾರ್ಯಕ್ರಮಗಳಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜತೆ ವೈದ್ಯಕೀಯ ಶಿಕ್ಷಣದ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳು, ಕರವೇ ಗ್ರಾಮ ಘಟಕದ ಪದಾಧಿಕಾರಿಗಳು, ಸದಸ್ಯರು, ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯರು ಸ್ವಯಂ ಪ್ರೇರಿತರಾಗಿ ಕ್ರಿಯಾಶೀಲ ವ್ಯಕ್ತಿತ್ವ ಮೂಲಕ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪಿಡಿಒ ಎಚ್.ಎನ್. ಬಾವಿಕಟ್ಟಿ, ಗ್ರಾಮಲೆಕ್ಕಾಧಿಕಾರಿ ಜೆ.ಎಂ. ನದಾಫ್, ಮುಖ್ಯಶಿಕ್ಷಕ ರಮೇಶ ಅಳಗುಂಡಿ, ಪಿಎಚ್‌ಸಿ ಸಿಬ್ಬಂದಿ ಸರೋಜಾ ಮಟಗಿ, ಸುರೇಶ ಬಾಣಸಿ, ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ ಇತರರು ಇದ್ದರು.