ಜಿಲ್ಲೆ

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅವರ ಅವಲಂಬಿತ ಯುವಕ ಮತ್ತು ಯುವತಿಯರಿಂದ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಫಿಕ್ ಡಿಸೈನಿಂಗ್, ವಿಡಿಯೋ ಎಡಿಟಿಂಗ್, ಸಾಫ್ಟ್ ವೇರ್, ಮಲ್ಟಿಮೀಡಿಯಾ ಮತ್ತು ಇಲೂಸ್ಟ್ರೇಷನ್ ಕೋರ್ಸ್‌ಗಳಿಗೆ ತರಬೇತಿ ನೀಡಲಾಗುವುದು.

ಆಸಕ್ತರು ಜಿಲ್ಲಾ ಅಧಿಕಾರಿಗಳ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ಸೈರಾಬಾಗ್ ಕಟ್ಟಡ 19/4, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು -52 ಇಲ್ಲಿಗೆ ಡಿ.5 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ: 080-29550306 ಸಂಪರ್ಕಿಸಬಹುದು.