ವಿಜಯವಾಣಿ ಸುದ್ದಿಜಾಲ ಕೋಟ
ಕರ್ಣಾಟಕ ಬ್ಯಾಂಕ್ ರಾಜ್ಯಾದ್ಯಂತ ಮನೆ ಮನದ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಅವರ ಸಮಾಜಮುಖಿ ಕಾರ್ಯಕ್ರಮಗಳು ಜನಮೆಚ್ಚುಗೆ ಗಳಿಸಿವೆ ಎಂದು ಪಾಂಡೇಶ್ವರ ಯೋಗಗುರು ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಹೇಳಿದರು.
ಪಾಂಡೇಶ್ವರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ನೀಡಿದ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಸಂಚಾಲಕ ಸುನೀಲ್ ಡಿಸಿಲ್ವ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ, ಪ್ರಮುಖರಾದ ಸೂರಾಲು ನಾರಾಯಣ ಮಡಿ, ರವೀಶ್ ಶ್ರೀಯಾನ್, ಸುಜಾತಾ ವೆಂಕಟೇಶ ಪೂಜಾರಿ, ಪ್ರತಾಪ್ ಶೆಟ್ಟಿ ಸಾಸ್ತಾನ ಉಪಸ್ಥಿತರಿದ್ದರು. ಸುರೇಶ್ ಪೂಜಾರಿ ಪ್ರಸ್ತಾವನೆಗೈದರು. ಕೃಷ್ಣ ಪೂಜಾರಿ ಸ್ವಾಗತಿಸಿದರು. ಸುನಿಲ್ ಪೂಜಾರಿ ನಿರೂಪಿಸಿದರು.
ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಬಂಧಕ ಕೆ.ವಾದಿರಾಜ್ ಶಾಲೆಗೆ ವಾಹನ ಹಸ್ತಾಂತರಿಸಿದರು. ಶಾಲಾ ಆಡಳಿತ ಮಂಡಳಿ ವತಿಯಿಂದ ಕೆ.ವಾದಿರಾಜ್ ಹಾಗೂ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ ಅವರನ್ನು ಸನ್ಮಾನಿಸಲಾಯಿತು. ಐರೋಡಿ ಶಾಖೆ ಪ್ರಬಂಧಕ ಮಂಜುನಾಥ ಶೇಟ್, ಅರವಿಂದ ಮೋಟಾರ್ಸ್‌ನ ಮಾರ್ಕೆಟಿಂಗ್ ವಿಭಾಗದ ರಾಕೇಶ್ ಅವರನ್ನು ಗೌರವಿಸಲಾಯಿತು.