ಜಿಲ್ಲೆ

1.68 ಲಕ್ಷ ಮನೆಗಳ ಸರ್ವೇ ಕಾರ್ಯ ಪೂರ್ಣ

Uttara Kannada - Subash Hegde
ಕಾರವಾರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಡೆಸಲಾಗುತ್ತಿರುವ ಸಮೀಕ್ಷೆ ಕಾರ್ಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ 6. 30 ಗಂಟೆಯವರೆಗೆ 1,68,046 ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ.  ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಶೇ.50.84 ರಷ್ಟು ಸಾಧನೆ ಮಾಡಲಾಗಿದೆ.

ಜಿಲ್ಲಾಧಿಕಾರಿಯಿಂದ ಪರಿಶೀಲನೆ 

ನೆಟ್ವರ್ಕ್‌ ಇಲ್ಲದ ಪ್ರದೇಶಗಳ ಜನರನ್ನು ಸಮೀಪದ ನೆಟ್ವರ್ಕ್‌ ಇರುವ ಸ್ಥಳಕ್ಕೆ ಕರೆತಂದು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಗವಾಗಿ  ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವ ಪ್ರದೇಶದಲ್ಲಿನ ಸಾರ್ವಜನಿಕರಿಗೆ, ಸಮೀಪದ ನೆಟ್‌ವರ್ಕ್ ಇರುವ ಪ್ರದೇಶದಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ವಿಶೇಷ ಶಿಬಿರಗಳನ್ನು ಆಯೋಜಿಸಿದ್ದು, ಮಂಗಳವಾರ ದೇವಳಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಭೇಟಿ ನೀಡಿ, ಸಮೀಕ್ಷಾ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝೂಫಿಶನ್ ಹಕ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡÀ ಏಗನಗೌಡರ, ಹಾಗೂ ಸಮೀಕ್ಷೆ ಸಿಬ್ಬಂದಿ ಹಾಜರಿದ್ದರು.