ಕೇಂದ್ರ ಸರ್ಕಾರದ ಕಾಫಿ ಮಂಡಳಿ ಮತ್ತು ಬೆಟಗೇರಿಯ ವ್ಯವಸಾಯ ಸಹಕಾರ ಬ್ಯಾಂಕಿನ ಜಂಟಿ ಆಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. 
ಜಿಲ್ಲೆ

ಬೆಟಗೇರಿಯಲ್ಲಿ ಮಣ್ಣು ಪರೀಕ್ಷಾ ಅಭಿಯಾನ

ಶಿವಶಂಕರ್ ಎಂ. ಹೆಬ್ಬಳ್ಳ

ನಾಪೋಕ್ಲು: ಕೇಂದ್ರ ಸರ್ಕಾರದ ಕಾಫಿ ಮಂಡಳಿ ಮತ್ತು ಬೆಟಗೇರಿಯ ವ್ಯವಸಾಯ ಸಹಕಾರ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಬುಧವಾರ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. ಭಾರತೀಯ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾಫಿ ತೋಟಗಳಲ್ಲಿ ಮಣ್ಣಿನ ಪರೀಕ್ಷಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಕೆವಿಕೆ ವಿಜ್ಞಾನಿಗಳು ಕಾಫಿ ತೋಟ, ಕಾಳುಮೆಣಸಿನ ಕೃಷಿಗೆ ಹಾಕುವ ರಸಗೊಬ್ಬರ ಕೀಟನಾಶಕಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಉಪನಿರ್ದೇಶಕ ಚಂದ್ರಶೇಖರ, ಬೆಟಗೇರಿ ವಿಎಸ್‌ಎಸ್‌ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ರೈ, ನಿವೃತ್ತ ಶಿಕ್ಷಕ ಕೆದಂಬಾಡಿ ಪುಟ್ಟಯ್ಯ, ಕಾಫಿ ಬೆಳೆಗಾರರು ಉಪಸ್ಥಿತರಿದ್ದರು.