ಜಿಲ್ಲೆ

6,021 ಗ್ರಾಪಂಗಳಿಗೆ ಸೋಲಾರ್ ಭಾಗ್ಯ; ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯದ 6,021 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ದೀಪ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕ ಅಳವಡಿಸಲು ವಿಶೇಷ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಎಲ್ಲ ಗ್ರಾಪಂಗಳಲ್ಲಿ ಹಸಿ-ಒಣ ಕಸ ವಿಂಗಡಿಸಲು ಸೂಚಿಸಲಾಗಿದ್ದು, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಣಕ್ಕೆ ಕೇಂದ್ರ ಸರ್ಕಾರ ಪ್ರತಿ ಗ್ರಾಪಂಗೆ 20 ಲಕ್ಷ ರೂ. ಅನುದಾನ ನೀಡಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರ್ಕಾರವೂ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಿದೆ. ಮಳೆಗಾಲದಲ್ಲಿ ಹಾನಿಗೀಡಾಗಿರುವ ಗ್ರಾಮೀಣ ಪ್ರದೇಶಗಳ ವಿಕಾಸಕ್ಕೆ ಸರ್ಕಾರ ಈಗಾಗಲೇ 1,500 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.