ಮಂಗಳೂರು : ಹಸಿರು ದಳ ಮತ್ತು ಎಪಿಡಿ ಪ್ರತಿಷ್ಠಾನದ ವತಿಯಿಂದ ನಗರದ ಪಚ್ಚನಾಡಿಯಲ್ಲಿ ವಾಸಿಸುವ 12 ತ್ಯಾಜ್ಯ ಸಂಗ್ರಹಿಸುವ ಕುಟುಂಬಗಳ ಸಣ್ಣ ಡೇರೆಗಳಿಗೆ 1.26 ಲಕ್ಷ ರೂ.ವೆಚ್ಚದಲ್ಲಿ ಸೋಲಾರ್ ದೀಪ ಅಳವಡಿಸಲಾಗಿದೆ.
ಈ ಕುಟುಂಬಗಳಿಗೆ ವಿದ್ಯುತ್ ಸೌಲಭ್ಯ ಇಲ್ಲದ ಕಾರಣ ರಾತ್ರಿ ವೇಳೆ ಮಕ್ಕಳು ಓದಲು ಕಷ್ಟಪಡುತ್ತಿದ್ದರು.ಇದನ್ನು ತಿಳಿದು ಹಸಿರು ದಳ ಮತ್ತು ಎಪಿಡಿ ಪ್ರತಿಷ್ಠಾನ ಸೌರ ದೀಪಗಳನ್ನು ಪೂರೈಸುವ ಯೋಜನೆ ರೂಪಿಸಿತು. ಸೆಲ್ಕೊ ಪ್ರತಿಷ್ಠಾನದ ಅಂಗಸಂಸ್ಥೆಯಾದ ಸೆಲ್ಕೋ ಇಂಡಿಯಾ ಕಡಿಮೆ ದರದಲ್ಲಿ ಸೌರ ದೀಪಗಳನ್ನು ಒದಗಿಸಿತು. ಸ್ಥಳೀಯ ಮತ್ತು ಅನಿವಾಸಿ ದಾನಿಗಳು ಯೋಜನೆಗೆ ನೆರವು ಒದಗಿಸಿದರು. ಸುಮಾರು 20 ಶಾಲಾ ಮಕ್ಕಳ ಓದಿಗೆ ಸೋಲಾರ್ ದೀಪ ಸಹಕಾರಿಯಾಗಲಿದೆ .