ಉಡಮಗಲ್ ಖಾನಾಪುರ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಣ ಮೇಳ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಂಚಾಲಕ ಡಾ.ದಂಡಪ್ಪ ಬಿರಾದಾರ್ ಉದ್ಘಾಟಿಸಿದರು. ಮುಖ್ಯಶಿಕ್ಷಕಿ ವೆಂಕಮ್ಮ ಮಮದಾಪುರ, ಭೂದಾನಿ ವೆಂಕನಗೌಡ, ನಾಗರಾಜಗೌಡ, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ನಾಗೇಂದ್ರ ರೆಡ್ಡಿ ದಳಪತಿ, ರಂಗಪ್ಪ, ಬಸವರಾಜ, ನ್ಯಾನೇಗೌಡ ಇತರರಿದ್ದರು. 
ಜಿಲ್ಲೆ

ಶಿಕ್ಷಣದ ಭದ್ರ ಬುನಾದಿಗೆ ಮೇಳ ಸಹಕಾರಿ

ನರೇಶ್ ಕುಮಾರ್

ರಾಯಚೂರು: ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆ ಹಾಗೂ ಶಿಕ್ಷಣ ಮೇಳ ಆಯೋಜಿಸುವುದರಿಂದ ಕಲಿಕೆಗೆ ಭದ್ರ ಬುನಾದಿ ಸಿಗಲಿದೆ ಎಂದು ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಂಚಾಲಕ ಡಾ.ದಂಡಪ್ಪ ಬಿರಾದಾರ್ ಹೇಳಿದರು.

ಉಡಮಗಲ್ ಖಾನಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಅಜೀಮ್ ಪ್ರೇಮ್‌ಜಿ ಫೌಂಡೇಷನ್‌ನಿಂದ ಆಯೋಜಿಸಿದ್ದ ಒಂದು ದಿನದ ಎಫ್‌ಎಲ್‌ಎನ್ ಶಿಕ್ಷಣ ಮೇಳ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕ ಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕೇವಲ ಪಠ್ಯಕ್ಕೆ ಸೀಮಿತವಾದ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸದೃಢತೆ ಪಡೆಯಬೇಕು ಎಂದರು.

ಮುಖ್ಯಶಿಕ್ಷಕಿ ವೆಂಕಮ್ಮ ಮಮದಾಪುರ, ಭೂದಾನಿ ವೆಂಕನಗೌಡ, ನಾಗರಾಜಗೌಡ, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ನಾಗೇಂದ್ರ ರೆಡ್ಡಿ ದಳಪತಿ, ರಂಗಪ್ಪ, ಬಸವರಾಜ, ನ್ಯಾನೇಗೌಡ, ಶಂಕರ ಇತರರಿದ್ದರು.