ಹಾವೇರಿ: ಯಾವುದೋ ಬೈಕ್ ಡಿಕ್ಕಿಯಾಗಿ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ನಡೆದಿದೆ.
ಇಜಾರಿಲಕಮಾಪುರ ಮಾರುತಿ ನಗರದ ಭರಮಪ್ಪ ಬಸಪ್ಪ ಕುಲಕಣಿರ್ ಮೃತ ವ್ಯಕ್ತಿ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.