ಜಿಲ್ಲೆ

ಯಾವುದೋ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Haveri - Kariyappa Aralikatti

ಶಿಗ್ಗಾಂವಿ: ಯಾವುದೋ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಅತ್ತಿಗೇರಿ ಗ್ರಾಮದ ಬಳಿ ಬುಧವಾರ ನಡೆದಿದೆ.

ತಾಲೂಕಿನ ಶಿಶುವಿನಹಾಳ ಗ್ರಾಮದ ಪ್ರಭುಗೌಡ ಶಂಕರಗೌಡ ಚಂದನಗೌಡ್ರ (48) ಮೃತ ವ್ಯಕ್ತಿ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.