ಜಿಲ್ಲೆ

ಕರಾವಳಿಗೆ ಎಲ್ಲೋ ಅಲಟ್ ಘೋಷಣೆ

Mangaluru - Shravan Kumar Nala

ದ.ಕ, ಉಡುಪಿ ಸೇರಿದಂತೆ ಹಲವಡೆ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲೋ ಅಲಟ್ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಬೆಳಗ್ಗೆ ದ.ಕ ಜಿಲ್ಲೆಯ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗಿದೆ.

ಸೋಮವಾರ ಬೆಳಗ್ಗೆ ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮೇ 19ರವರೆಗೆ ರಾಜ್ಯದ ಬಹುತೇಕ ಸ್ಥಳದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯು 30 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗಲಿದೆ. ಮಂಗಳವಾರ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಬೆಳಗ್ಗಿನಿಂದ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುತ್ತಿದೆ. ಮಂಗಳೂರು, ಉಡುಪಿ, ಕಾರವಾರ ಬೀಚ್ ವ್ಯಾಪ್ತಿಯಲ್ಲೂ ಕಡಲಬ್ಬರ ಹೆಚ್ಚಳಗೊಳ್ಳುತ್ತಿದೆ.

ದ.ಕ ಜಿಲ್ಲೆಯಲ್ಲಿ ಸೋಮವಾರ ಸರಾಸರಿ 33.1 ಡಿಗ್ರಿ ಗರಿಷ್ಟ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಸಂಜೆ 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಪೂರಾ ಒಣ ಚಳಿ ಮುಂದುವರಿದಿತ್ತು. ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸರಾಸರಿ 33.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಸಾಧಾರಣ ಮಳೆ ಸಹಿತ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.